ರೈತರ ಉದ್ದಾರಕ್ಕೆ ಇದೊಂದೇ ಪರಿಹಾರ.
ರೈತನೊಬ್ಬ ತಾನು ಬೆಳೆದ ಉತ್ಪನ್ನವನ್ನು ತಾನೇ ಮಾರಿ ಸಮಾನ ಮನಸ್ಕರಿಗೂ ಮಾರುಕಟ್ಟೆ ಒದಗಿಸಿಕೊಟ್ಟಿರುವುದು ಬಹುಷಃ ಇನ್ನೆಲ್ಲೂ ಇರಲಿಕ್ಕಿಲ್ಲ. ಇದು ಈ ಹಿಂದೆಯೂ ಆದ ಉದಾಹರಣೆ ಇಲ್ಲ. ಇದೊಂದು ಹೊಸ ಪರಿಕಲ್ಪನೆ. ಕೊರೋನಾ ಮಹಾಮಾರಿ ದೇಶದ ಅಸಂಖ್ಯಾತ ಜನರಿಗೆ ಬಾರೀ ತೊಂದರೆಯನ್ನು ಉಂಟು ಮಾಡಿತು. ಉದ್ದಿಮೆಗಳು ಮುಚ್ಚಿದವು. ಕೆಲಸಗಾರರು ಕೆಲಸ ಕಳೆದುಕೊಂಡರು. ರೈತರು ಬದುಕಿಗಾಗಿ ಬೆಳೆದ ಬೆಳೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಯಿತು. ಇಂತಹ ಸಂದರ್ಭದಲ್ಲಿ ಒಬ್ಬ ಕೃಷಿಕ ಮಾಡಿದ ಸಾಧನೆ ಮಾತ್ರ ಕೃಷಿಕರೆಲ್ಲರಿಗೂ ಅನುಕರಣೀಯ. ಹಿರಿಯಡ್ಕದ…
